April 24, 2020

ವೇದಮಂತ್ರವು ಯಾವುದೋ ಒಂದು ಜಾತಿಗಾಗಿ ಹೇಳಿದೆಯೇ?

ಮನುಷ್ಯನ ಜೀವನಕ್ಕೆ ಉತ್ಸಾಹ ತುಂಬುವ ಒಂದು ವೇದ ಮಂತ್ರದ ಬಗ್ಗೆ ಇಂದು ವಿಚಾರ ಮಾಡೋಣ.

ಶುಕ್ರೋsಸಿ ಭ್ರಾಜೋsಸಿ ಸ್ವರಸಿ ಜ್ಯೋತಿರಸಿ|

ಆಪ್ನುಹಿ ಶ್ರೇಯಾಂಸಮತಿ ಸಮಂ ಕ್ರಾಮ||

[ಅಥರ್ವ: -೧೧-]

ಅರ್ಥ:

ಶುಕ್ರ: ಅಸಿ= ಮಾನವ ನೀನು ನಿರ್ಮಲ ನಾಗಿದ್ದೀಯೇ

ಭ್ರಾಜ: ಅಸಿ = ನೀನು ತೇಜಸ್ವಿಯಾಗಿದ್ದೀಯೇ

ಸ್ವ: ಅಸಿ = ಸ್ವಸಾಮರ್ಥ್ಯಶಾಲಿಯಾಗಿದ್ದೀಯೇ

ಜ್ಯೋತಿ: ಅಸಿ = ಜ್ಞಾನ ಪ್ರಕಾಶದಿಂದ ಬೆಳಗುವನಾಗಿದ್ದೀಯೇ

ಶ್ರೇಯಾಂಸಂ ಆಪ್ನುಹಿ = ಶ್ರೇಯಸ್ಸನ್ನು ಸಾಧಿಸಿಕೋ

ಸಮಂ ಅತಿಕ್ರಾಮ = ಸಮನಾದವನನ್ನು ಮೀರಿಸಿ ಮುಂದೆ ನಡೆ

     ಮಂತ್ರದ ಹಿರಿಮೆ ನೋಡಿ, ಹೇಗಿದೆ! ಮನುಷ್ಯನನ್ನು ನೀನು ಪಾಪಿಎನಲಿಲ್ಲ. ಬದಲಿಗೆ ನೀನು ನಿರ್ಮಲನಾಗಿದ್ದೀಯೆ, ನೀನು ಪ್ರಕಾಶಮಾನವಾಗಿದ್ದೀಯೇ, ನೀನು ತೇಜಸ್ವಿಯಾಗಿದ್ದೀಯೇನೀನು ಸ್ವಸಾಮರ್ಥ್ಯಶಾಲಿಯಾಗಿದ್ದೀಯೇನೀನು ಜ್ಞಾನ ಪ್ರಕಾಶದಿಂದ ಬೆಳಗುವನಾಗಿದ್ದೀಯೇ,  ಶ್ರೇಯಸ್ಸನ್ನು ನೀನೇ ಸ್ವತ: ಸಾಧಿಸಿ ಅಧ್ಯಾತ್ಮ ಮಾರ್ಗದಲ್ಲಿ ನಿನ್ನ ಸಮ ಇರುವವರನ್ನು ಮೀರಿಸಿ ಮುಂದೆ ನಡೆ. ವೇದದ ಮಂತ್ರವನ್ನು ಅರ್ಥಮಾಡಿಕೊಳ್ಳುವಾಗ ಒಮ್ಮೆ ನನ್ನ ಮೈ ಝುಮ್ ಎಂದಿತು. ಮಂತ್ರದ ಅರ್ಥವನ್ನು ಮನಸ್ಸಿಟ್ಟು ಓದಿ ನಿಮಗೂ ಹಾಗನ್ನಿಸದೆ ಇರದು.

     ಮಂತ್ರವು ಯಾವುದೋ ಒಂದು ಜಾತಿಗಾಗಿ ಹೇಳಿದೆಯೇ? ವೇದ ಮಂತ್ರಗಳು ಸಕಲ ಮಾನವನ ಅಭ್ಯುದಯಕ್ಕಾಗಿ ಇರುವ  ಮಾರ್ಗದರ್ಶನ. ಒಂದು ವೇಳೆ ಒಬ್ಬ ಮನುಷ್ಯನು ಇನ್ನೊಬ್ಬನಿಗಿಂತ     ಅವನು ಕೆಳಗಿದ್ದೀನಿ, ಎಂದು ಕೀಳರಿಮೆ ಹೊಂದಿದ್ದರೆ, ಅವನಿಗೆ ಎಂತಾ ಆತ್ಮವಿಶ್ವಾಸವನ್ನು ತುಂಬುತ್ತದೆಂದರೆ ನಿನ್ನಲ್ಲಿ ಚೈತನ್ಯವಿದೆ, ನೀನು ಸಾಮರ್ಥ್ಯವನ್ನು ಹೊಂದಿದ್ದೀಯ, ಮುನ್ನಡೆ ಎಂದು ಹುರಿದುಂಬಿಸುತ್ತದೆ.

    ನೀನು ಪಾಪಿ! ನಿನಗೆ ಪುಣ್ಯ  ಸಿಗಬೇಕಾದರೆ ಇಂತಾ ದೇವರನ್ನು ನಂಬು, ಗ್ರಂಥವನ್ನು ಓದು, ಪ್ರವಾದಿಯನ್ನು ನಂಬು ಎಂದು ಹೇಳುವ, ಮನುಷ್ಯನನ್ನು ಭೀತಿಯಲ್ಲಿ ತಳ್ಳುವ ಮತಗಳ ಬಗ್ಗೆ ನಮಗೆ ಅರಿವಿದೆ. ಆದರೆ ಹಾಗೆ   ವೇದವು  ಹೇಳಲೇ ಇಲ್ಲ. ವೇದವನ್ನು ನಂಬು ಎಂದೂ ಕೂಡ ವೇದವು ಹೇಳಲಿಲ್ಲ. ಮನುಷ್ಯನು ಯಾವ ಮಾರ್ಗದಲ್ಲಿ ನಡೆಯಬೇಕೆಂಬುದನ್ನು ವೇದಮಂತ್ರ ಒಂದು ಹೇಳುತ್ತದೆ ಯಾವುದು ಪ್ರಾಚೀನದಿಂದ ಬಂದಿದೆಯೋ, ಯಾವುದು ಇಂದಿನ ನವೀನ ಜ್ಞಾನವಿದೆಯೋ, ಯಾವುದು ಶಾಸ್ತ್ರಗಳಲ್ಲಿ ಹೇಳಿದೆಯೋ, ಯಾವುದು ನಿನ್ನ ಅಂತರಂಗದಲ್ಲಿ ಹುಟ್ಟುತ್ತದೋ, ಎಲ್ಲವಕ್ಕೂ ಕಿವಿಗೊಡು, ಆದರೆ ಯಾವುದು ನಿನ್ನನ್ನು  ಕಲ್ಯಾಣಮಾರ್ಗದಲ್ಲಿ ಕರೆದುಕೊಂಡು ಹೋಗಬಲ್ಲದೆಂದು ನಿನ್ನ ವಿವೇಕ ಹೇಳುತ್ತದೆಯೋ, ಮಾರ್ಗದಲ್ಲಿ ನಿನ್ನ ಜೀವನರಥ ಸಾಗಲಿ ಮಂತ್ರದ ಬಗ್ಗೆ ಪ್ರತ್ಯೇಕವಾಗಿಯೇ ವಿಚಾರ ಮಾಡೋಣ. ಆದರೆ ಸಧ್ಯಕ್ಕೆ ಇಷ್ಟನ್ನು ನಾವು ಅರ್ಥ ಮಾಡಿಕೊಳ್ಳಬಹುದು. ವೇದದಲ್ಲಿ ನಮ್ಮ ಬದುಕಿಗೆ ಅಗತ್ಯವಾದ ಎಲ್ಲಾ ಮಾರ್ಗದರ್ಶನ ಲಭ್ಯವಿದ್ದರೂ ವೇದವು ತನ್ನನ್ನೇ ನಂಬಿ ಎಂದು ಎಲ್ಲೂ ಹೇಳಿಲ್ಲ.

ಮನುಷ್ಯನಿಗೆ ಉನ್ನತಿಹೊಂದಲು ಇದಕ್ಕಿಂತ ಇನ್ನೇನು ಬೇಕು? ಇಂತಹಾ ಆತ್ಮಸ್ಥೈರ್ಯವನ್ನು ತುಂಬುವಂತಹ ವೇದಮಂತ್ರವನ್ನು ಬದಿಗಿಟ್ಟು ಅದನ್ನು ಪಂಡಿತರ ಮಡಿವಂತ ಪಟ್ಟಿಗೆ ಸೇರಿಸಿ ಅದರಿಂದ ದೂರವಿದ್ದೀವಲ್ಲಾ! ಇದಕ್ಕಿಂತ ದೌರ್ಭಾಗ್ಯ ಮತ್ತೊಂದಿದೆಯೇ?

ಮಂತ್ರವನ್ನು ಅರ್ಥಮಾಡಿಕೊಳ್ಳುವಾಗ ನಮ್ಮ ಶಾಲೆಗಳಲ್ಲಿ ಮಕ್ಕಳಿಗೆ ನಮ್ಮ ಶಿಕ್ಷಕರುಗಳು ಪಾಠಮಾಡುವ ಚಿತ್ರವು ನನ್ನ ಕಣ್ಮುಂದೆ ಬಂತು.ಎಲ್ಲರಿಗೂ ವಿಚಾರ ಗೊತ್ತಿದೆಯಾದರೂ ಸಂದರ್ಭದಲ್ಲಿ ನಾನು ನನ್ನೆಲ್ಲಾ ಮಿತ್ರರ ಗಮನವನ್ನು ಇತ್ತ ಸೆಳೆಯಲು ಬಯಸುತ್ತೇನೆ.

    ನಮ್ಮ ಪ್ರೈಮರಿ ಶಾಲೆಗಳಿಗೆ ಹೋಗಿ ನೋಡಿ [ಕೆಲವು ಶಾಲೆಗಳು ಅಪವಾದವಿರಬಹುದು] ಅಲ್ಲಿನ ಶಿಕ್ಷಕರುಗಳ ಬಾಯಲ್ಲಿ ಬರುವ ಮಾತುಗಳನ್ನು ಕೇಳಿ ಇನ್ನು ಹತ್ತು ಜನ್ಮ ಎತ್ತಿ ಬಂದರೂ ನಿನಗೆ ಬುದ್ಧಿ ಬರುಲ್ಲಾ  ಅಂತಾ  ದಡ್ಡಾ ನೀನು. ಅವನನ್ನು ನೋಡು ಎಷ್ಟು ಸೊಗಸಾಗಿ ಇಂಗ್ಲೀಷಲ್ಲಿ  ಮಾತನಾಡುತ್ತಾನೆ! ಎಷ್ಟು ಶಿಸ್ತಾಗಿ ಅವರ ಮನೆಯಲ್ಲಿ ಬೆಳೆಸಿದ್ದಾರೆ, ನೋಡು! ನೀನು ಇದೀಯ ಮಂಕು ಮುಂಡೇದು!!

ವೇದವು ಹೇಳುತ್ತಿದೆ  ನೀನು ಸಮರ್ಥ, ನೀನು ತೇಜಸ್ವೀ, ನೀನು ಪರಿಶುದ್ಧ

    ಆದರೆ ನಮ್ಮ ಶಾಲೆಯ ಕೆಲವು ಶಿಕ್ಷಕರುಗಳು ಹೇಳುತ್ತಾರೆ  ನೀನು ದಡ್ಡ, ನೀನು ಪೆದ್ದ, ನೀನು ನಿಶ್ಪ್ರಯೋಜಕ ನೋಡಿ ಗ್ರಹಚಾರ ಹೇಗಿದೆಶಿಕ್ಷಕರುಗಳ ಹತ್ತಿರ ಛೀಮಾರಿ  ಹಾಕಿಸಿಕೊಳ್ಳುವ ವಿದ್ಯಾರ್ಥಿಯ ಮಾತಾ ಪಿತೃಗಳು ಶಾಲೆಯ ಭವ್ಯವಾದ ಕಟ್ಟಡ, ಫುಲ್ಸೂಟ್ ಹಾಕಿರುವ ಪ್ರಿನ್ಸಿಪಾಲ್ [ನಮ್ಮ ಕಾಲದಲ್ಲಿ ಕಾಲೇಜುಗಳಲ್ಲಿ ಮಾತ್ರ ಪ್ರಿನ್ಸಿಪಾಲರಿರುತ್ತಿದ್ದರು. ಹೈಸ್ಕೂಲ್ಗಳಿಗೆ ಇರುತ್ತಿದ್ದವರೂ ಹೆಡ್ ಮಾಸ್ಟರ್ ಮಾತ್ರವೇ. ಈಗೆಲ್ಲಾ ಪ್ರೈಮರಿ ಶಾಲೆಗೂ ಪ್ರಿನ್ಸಿಪಾಲರಿರುತ್ತಾರೆ] ಶಾಲೆಯ ಗೇಟ್ನಲ್ಲೊಬ್ಬ ಮಿಲಿಟರಿ ಉಡುಪು ಧರಿಸಿರುವ  ಗಾರ್ಡ್ಇವೆಲ್ಲಾ ಚಿತ್ರಣವನ್ನು ನೋಡಿ ಕೇಳಿದಷ್ಟು ಡೊನೇಶನ್ ಕೊಟ್ಟು ಮಕ್ಕಳನ್ನು ಶಾಲೆಗೆ ಸೇರಿಸಿ ನಂತರ ಶಿಕ್ಷಕರುಗಳಿಂದ ಮಕ್ಕಳಿಗೆ ಮಾನಸಿಕ ಹಿಂಸೆ ಕೊಡುವಂತಹ ಕೆಟ್ಟ ಶಿಸ್ತನ್ನು ಹೇರಿಸಿಕೊಳ್ಳುವುದು!! ಇದು  ಬೇಕಿತ್ತಾ? ಯಾವಾಗ ನಮ್ಮ ಪೋಷಕರುಗಳಿಗೆ ಬುದ್ಧಿ ಬರುತ್ತೋ ಗೊತ್ತಿಲ್ಲ.

ಮಕ್ಕಳನ್ನು ಅಯೋಗ್ಯರೆಂದು ಯಾರಾದರೂ ಶಿಕ್ಷಕರು ಹೇಳಿದರೆ ಅಂತವರು ಸುಭಾಷಿತವನ್ನು ಮೊದಲು ಅರ್ಥಮಾಡಿಕೊಳ್ಳಬೇಕು.

 


1 comment:

If you have any doubts. please let me know...