॥ *ಆಷಾಢ ಮಾಸದ ಮಹತ್ವ* ॥
* ಶಿವ ಪಾರ್ವತಿಗೆ ಅಮರತ್ವದ ರಹಸ್ಯ ಹೇಳಿರುವುದು ಈ ಮಾಸದಲ್ಲೇ.
* ಗಂಗೆ ಭೂಮಿಗೆ ಉತ್ತರಾಭಿಮುಖವಾಗಿ ಹರಿದು ಬಂದಿದ್ದು ಈ ಮಾಸದಲ್ಲಿ.
* ಮಹಾ ಪತಿವ್ರತೆ ಅನುಸೂಯಾದೇವಿ ನಾಲ್ಕು ಸೋಮವಾರ ಶಿವ ವ್ರತ ಮಾಡಿದ್ದಳು.
* ಅಮರನಾಥದ ಹಿಮಲಿಂಗ ದರ್ಶನ ಪ್ರತಿ ವರ್ಷ ಆರಂಭವಾಗುವುದು ಈ ಸಮಯದಲ್ಲೇ.
* ಪ್ರಥಮ ಏಕಾದಶಿ ವ್ರತ ಆರಾಧನೆ ಬರುವುದು ಆಷಾಢದಲ್ಲಿ.
* ಆಷಾಢದ ಶುಕ್ರವಾರಗಳಲ್ಲಿ ಲಕ್ಷ್ಮಿ ಪೂಜೆಯನ್ನು ವಿಶೇಷವಾಗಿ ಆಚರಿಸುವರು. ಆ ದಿನ ಸಂಜೆ ಮನೆ ಮುಂದೆ ದೀಪ ಹಚ್ಚಿ ಇಡುತ್ತಾರೆ. ಈ ಆಚರಣೆ ಮೈಸೂರು ಪ್ರಾಂತ್ಯಗಳಲ್ಲಿ ಹೆಚ್ಚು.
*ಈ ಮಾಸದಲ್ಲೇ ಇದೆಲ್ಲಾ ಆರಂಭವಾಗಿದ್ದು...*
* ಬಲಿ ಚಕ್ರವರ್ತಿ ಶಾಂಡಿಲ್ಯ ವ್ರತ ಪ್ರಾರಂಭ ಮಾಡಿದ.
* ಇಂದ್ರನು ಗೌತಮರಿಂದ ಸಹಸ್ರಾಕ್ಷನಾಗು ಎಂಬ ಶಾಪ ಪಡೆದ, ಹಾಗೂ ಅದರ ವಿಮೋಚನೆಗೆ ಆಷಾಢದಲ್ಲಿ ನಾಲ್ಕು ಸೋಮವಾರ *ಸೋಮೇಶ್ವರ ಜಯಂತಿ* ವ್ರತವನ್ನು ಮಾಡಿ ಶಾಪ ವಿಮೋಚನೆ ಪಡೆದ.
* ಸುಮಂಗಲಿಯರು ದೀರ್ಘಕಾಲದ ಮಾಂಗಲ್ಯ ಪಾಪ್ತಿಗಾಗಿ ಆಷಾಢ ಮಾಸದ ಅಮಾವಾಸ್ಯೆಯ ಸಂಜೆ *ಜ್ಯೋತಿರ್ಭೀಮೇಶ್ವರ ವ್ರತ*ವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಾರೆ.
*ಆಷಾಢ ಹುಣ್ಣಿಮೆ ದಿನ *ಗುರು ಪೂರ್ಣಿಮೆ*ಯನ್ನು ಎಲ್ಲಾ ಮಠ ಮಂದಿರಗಳಲ್ಲಿ ಆಚರಿಸಿ ಚಾತುರ್ಮಾಸ್ಯ ವ್ರತವನ್ನು ಪ್ರಾರಂಭ ಮಾಡುತ್ತಾರೆ.
* ಆಷಾಢದ ಶುಕ್ಲ ಪಕ್ಷದ ಪಂಚಮಿ ದಿನದಂದು *ಅಮೃತ ಲಕ್ಷ್ಮೀ ವ್ರತ*ವನ್ನು ಮಹಿಳೆಯರು ಭಕ್ತಿಯಿಂದ ಆಚರಿಸುತ್ತಾರೆ. ಈ ಎಲ್ಲಾ ಮಹತ್ವಗಳು ಆಷಾಢ ಮಾಸದಲ್ಲಿ ಇರುವುದರಿಂದ ಈ ಮಾಸವೂ ಸಹ ವಿಶೇಷವೇ ಆಗಿದೆ. ಇನ್ನೊಂದು ವಿಶೇಷ ಎಂದರೆ ಮೈಸೂರಿನ *ಚಾಮುಂಡೇಶ್ವರಿ ದೇವಿಯ ಜನ್ಮ ದಿನ* ಬರುವುದು ಈ ಮಾಸದಲ್ಲೇ.
No comments:
Post a Comment
If you have any doubts. please let me know...