ಅರಿಸಿನ ದಾನ : ಅರಿಸಿನ ದಾನ ಮಾಡಿದಷ್ಟು ರೋಗ ನಿವಾರಣೆ ಆಗುತ್ತದೆ. ಸುಮಂಗಲಿಯರಿಗೆ ಸೌಭಾಗ್ಯತನ ವೃದ್ಧಿಸುತ್ತದೆ. ಸುಮಂಗಲಿಯರಿಗೆ ಸುಮಂಗಲಿತನ ಯಾವಾಗಲೂ ಇರಲಿ ಎಂಬ ಉದ್ದೇಶಕ್ಕೆ ಮೊದಲು ಅರಿಸಿನ ಕೊಡುತ್ತಾರೆ.
ಕುಂಕುಮ ದಾನ : ಕುಂಕುಮವನ್ನು ಯಾರು ಧರಿಸುತ್ತಾರೋ ಅವರು ಬಹಳ ತೇಜಸ್ಸು ಮತ್ತ ನಂಬಿಕೆ ಜಾಸ್ತಿ ಆಗುತ್ತೆ.. ಕುಂಕುಮ ಧಾರಣೆಯಿಂದ ದೈವಶಕ್ತಿ ಜಾಸ್ತಿಯಾಗುತ್ತದೆ. ದೃಷ್ಟಿದೋಷ ನಿವಾರಣೆ ಆಗುತ್ತದೆ. ಕೋಪ, ಹಠ,ಕಮ್ಮಿ ಆಗುತ್ತದೆ.
ಸಿಂಧೂರ ದಾನ ; ಸತಿ ಪತಿ ಕಲಹ ನಿವಾರಣೆ.., ರೋಗಭಾಧೆ,ಋಣಭಾದೆ, ನಿವಾರಣೆ. ಮನೆಯಲ್ಲಿ ಸಂದೇಹ, ಒಳಜಗಳ, ಮಾಂತ್ರಿಕ ದೋಷಗಳು ನಿವಾರಣೆಯಾಗುತ್ತದೆ ಈ ಕಾರಣಕ್ಕೆ ಶ್ರೀ ಆಂಜನೇಯ ಸ್ವಾಮಿಗೆ ಕೇಸರಿ ಅಲಂಕಾರ ಮಾಡುತ್ತಾರೆ.
ಕನ್ನಡಿ ದಾನ : ಕನ್ನಡಿಗೆ ಸಂಸ್ಕೃತದಲ್ಲಿ "ದರ್ಪಣ" ಎನ್ನುತ್ತಾರೆ. ಇದನ್ನು ಯಾರು ಪ್ರತಿದಿನ ನೋಡುತ್ತಾರೆಯೋ ಅವರಿಗೆ ಅಪಮೃತ್ಯು ಬರುವುದಿಲ್ಲ. ಮನೆಯಲ್ಲಿ ಕನ್ನಡಿ, ದೇವರ photo, ಹಿರಿಯರು ಉಪಯೋಗಿಸುವ ಬೆತ್ತ (walking stick) , ಪಡೆಯಬಾರದು. ಒಡೆದರೆ ಮನೆಗೇ ಆಪತ್ತು ಬಂದು ಬಿಡುತ್ತದೆ. ಕನ್ನಡಿ ದಾನ ಮಾಡುವುದರಿಂದ ಚರ್ಮವ್ಯಾಧಿ ಬರುವುದಿಲ್ಲ.., ದೇವರಿಗೆ, ದೇವಾಲಯಗಳಲ್ಲಿ ದರ್ಪಣ ಸೇವೆ ಮಾಡಿಸಿದರೆ, ನಿಮ್ಮ ಸಮಸ್ತ ಪಾಪಗಳೂ ನಿವಾರಣೆಯಾಗುತ್ತದೆ. ಮನೆಯಲ್ಲಿ ಮುಸುಕಾದ, ಒಡೆದ ಕನ್ನಡಿಯನ್ನು ಬಳಸಿದರೆ, ದಾರಿದ್ರ್ಯ ಹಾಗೂ ಬಡತನ ಬರುತ್ತದೆ.
ಬಾಚಣಿಗೆ ದಾನ : ಬಾಚಣಿಗೆ ದಾನ ಮಾಡೋದರಿಂದ, ಮುಖದಲ್ಲಿ ತೇಜಸ್ಸು ಹೆಚ್ಚಾಗಿ, ಮನೆಯಲ್ಲಿ ಅಲಂಕಾರದ ವಸ್ತುಗಳು ಜಾಸ್ತಿಯಾಗುತ್ತದೆ.
ಕಾಡಿಗೆ : ಕಾಡಿಗೆ ದಾನ ಮಾಡೋದ್ರಿಂದ ಕಣ್ಣಿಗೆ ಸಂಬಂಧ ಪಟ್ಟ ದೋಷಗಳು ನಿವಾರಣೆಯಾಗುತ್ತದೆ, ಮನೆಯ ಮೇಲೆ ಆಗಿರುವ, ಅಥವ ದಂಪತಿಗಳ ಮೇಲೆ ಆಗಿರುವ ದೃಷ್ಟಿ ದೋಷ ನಿವಾರಣೆಯಾಗುತ್ತದೆ.
ಅಕ್ಕಿ : ಅಕ್ಕಿ ಎಷ್ಟು ದಾನ ಮಾಡುತ್ತೀರೋ ಅಷ್ಟೂ ಅನ್ನಪೂರ್ಣೇಶ್ವರೀ ದೇವಿ ತೃಪ್ತಳಾಗುತ್ತಾಳೆ. ಧನಲಕ್ಷ್ಮೀ ಮನೆಯಲ್ಲಿ ಶಾಶ್ವತವಾಗಿ ನೆಲೆಸುತ್ತಾಳೆ. ಮನೆಯಲ್ಲಿ ಶಾಂತ ವಾತಾವರಣ ಇದ್ದು, ಮಕ್ಕಳು ಸನ್ಮಾರ್ಗದಲ್ಲಿ ನಡೆಯುತ್ತಾರೆ...
ತೊಗರಿಬೇಳೆ : ತೊಗರಿಬೇಳೆ ದಾನ ಮಾಡೋದ್ರಿಂದ ಕುಜದೋಷ ನಿವಾರಣೆಯಾಗುತ್ತದೆ. ಪ್ರತಿದಿವಸ ತೊಗರಿಬೇಳೆಯನ್ನು ಯಾರು ತಿನ್ನುತ್ತಾರೋ ಅವರಿಗೆ ಧೈರ್ಯ ಜಾಸ್ತಿ ಇರುತ್ತದೆ.., ಈ ಕಾರಣಕ್ಕೆ ಹುಳಿ ಮತ್ತು ಸಾಂಬಾರ್ ಲಿ ತೊಗರಿಬೇಳೆ ಜಾಸ್ತಿ ಉಪಯೋಗಿಸುವುದು. ತೊಗರಿಬೇಳೆ ದಾನದಿಂದ ಸತಿಪತಿ ಕಲಹ ನಿವಾರಣೆಯಾಗುತ್ತದೆ, ದೇಹದಲ್ಲಿರುವ fatness ಹೊರಟುಹೋಗುತ್ತದೆ. ಅಧಿಕ ರಕ್ತದ ಒತ್ತಡ ಇರುವವರು ೯ ಮಂಗಳವಾರ ತೊಗರಿಬೇಳೆ ದಾನವನ್ನು ಮಾಡಿದರೆ, ಆರೋಗ್ಯವಂತರಾಗಿ, ಧೃಡಕಾಯ ಶರೀರ ಪಡೆಯುತ್ತಾರೆ...
ಉದ್ದಿನ ಬೇಳೆ : ಪ್ರತೀ ತಿಂಗಳು, ಪ್ರತೀ ವರ್ಷ, ಮಹಾಲಯ ಅಮಾವಾಸ್ಯೆ, ತರ್ಪಣ ಕೊಡದೇ ಇದ್ದರೆ, ವೈಧಿಕ ಮಾಡುವಾಗ ದೋಷಗಳಾಗಿದ್ದರೆ, ಜಾತಕದಲ್ಲಿ ಪಿತೃಶಾಪ ಇದ್ದರೆ, ಮಕ್ಕಳು ಕೆಟ್ಟದಾರಿಯಲ್ಲಿ ನಡೆಯುತ್ತಿದ್ದರೆ, ಶತೃಗಳ ಕಾಟ ಜಾಸ್ತಿ ಆಗಿದ್ದರೆ, ಉದ್ದಿನ ಬೇಳೆ ದಾನ ಮಾಡೋದ್ರಿಂದ ಈ ದೋಷಗಳೆಲ್ಲಾ ನಿವಾರಣೆಯಾಗುತ್ತದೆ .
ತೆಂಗಿನಕಾಯಿ : ತೆಂಗಿನಕಾಯಿಗೆ ಅಧಿದೇವತೆ ಸಂತಾನ ಲಕ್ಷ್ಮಿ, ಇಷ್ಟಾರ್ಥ ಪ್ರದಾಯಿನಿ ಅಂತನೂ ಕರೆಯುತ್ತಾರೆ .. ಮಕ್ಕಳಾಗಿಲ್ಲ, ಸಂತಾನ ಸಮಸ್ಯೆ ಇರೋವ್ರು ತೆಂಗಿನಕಾಯಿ ದಾನ ಮಾಡುತ್ತಾ ಬಂದರೆ ಸಂತಾನವಾಗುತ್ತದೆ. ನಮ್ಮ ಕಾರ್ಯಗಳು ಶೀಘ್ರವಾಗಿ ಮತ್ತು ನಿರ್ವಿಘ್ನವಾಗಿ, ಲಾಭವಾಗಿ ನಡೆಯಲಿ ಅನ್ನೋ ಕಾರಣಕ್ಕೆ " ಪೂರ್ಣಫಲ" ಇಟ್ಟು ನೈವೇದ್ಯ ಮಾಡಬೇಕು. ತಾಂಬೂಲದ ಜೊತೆ ತೆಂಗಿನಕಾಯಿ ದಾನ ಮಾಡೋದ್ರಿಂದ "ಅಶ್ವಮೇಧಯಾಗದ " ಫಲ ಬರುತ್ತದೆ. Gastric, kidney problems solve ಆಗುತ್ತೆ. ಸಕಲ ಕಷ್ಟಗಳೂ ನಿವಾರಣೆಯಾಗುತ್ತದೆ ...
ವೀಳ್ಯದೆಲೆ : ವೀಳ್ಯದೆಲೆಗೆ ದೇವತೆ ಧನಲಕ್ಷ್ಮೀ. ವೀಳ್ಯದೆಲೆ ತಾಂಬೂಲ ದಾನ ಮಾಡುವುದರಿಂದ ಅಧಿಕವಾದ ಧನ ಪ್ರಾಪ್ತಿಯಾಗುತ್ತದೆ.., ಮಹಾಲಕ್ಷ್ಮಿಯು ಅಂತಹ ಮನೆಯಲ್ಲಿ ಶಾಶ್ವತವಾಗಿ ನೆಲೆಸಿರುತ್ತಾಳೆ.., ಗಂಗಾದೇವಿ ಪ್ರಸನ್ನಳಾಗುತ್ತಾಳೆ. ಮನೆಯ ಮುಂದೆ ವೀಳ್ಯದೆಲೆ ಬಳ್ಳಿ ಬೆಳೆದರೆ, ಆ ಮನೆಯ ಸರ್ವ ದೋಷವೂ, ವಾಸ್ತು ದೋಷವೂ ನಿವಾರಣೆಯಾಗುತ್ತದೆ .
ಅಡಿಕೆ : ಅಡಿಕೆಗೆ ಸಂಸ್ಕೃತದಲ್ಲಿ ಪೂಗೀಫಲ ಎನ್ನುತ್ತಾರೆ. ಯಾರು ತಾಂಬೂಲವನ್ನು ಪ್ರತಿದಿನ ಹಾಕಿಕೊಳ್ಳುತ್ತಾರೋ ಅವರ ಇಷ್ಟಾರ್ಥ ಸಿದ್ಧಿಯಾಗುತ್ತದೆ.., ಬಹಳ ಬೇಗ ಬಯಕೆಗಳು ಈಡೇರುತ್ತವೆ. ಬರೀ ಅಡಿಕೆಯನ್ನು ತಿಂದರೆ " ಬ್ರಹ್ಮಹತ್ಯಾದೋಷ ಬರುತ್ತದೆ.
ಫಲದಾನ : ಫಲದಾನಕ್ಕೆ ಜ್ಞಾನಲಕ್ಷ್ಮಿ ಅಧಿಪತಿ. ಫಲದಾನ ಮಾಡುವುದರಿಂದ ನಿಮ್ಮ ಕಾರ್ಯಗಳು ಸುಸೂತ್ರವಾಗಿ, ಸುಗಮವಾಗಿ ನಡೆಯುತ್ತದೆ, ಹಾಗೂ ಲಾಭದಾಯಕವಾಗುತ್ತದೆ. ಸ್ತ್ರೀ ಶಾಪ ನಿವಾರಣೆಯಾಗುತ್ತದೆ, ಗುರು ಪೂಜೆ ಮಾಡಿ ಹಣ್ಣು ದಾನ ಮಾಡಿದರೆ ಗುರುದೋಷಗಳು ನಿವಾರಣೆಯಾಗುತ್ತದೆ. ಅಮಾವಾಸ್ಯೆ ಅಥವ ವೈಧಿಕದ ದಿನ ಹಣ್ಣುದಾನ ಮಾಡಿದರೆ ಸಕಲ ಪಿತೃದೋಷ ನಿವಾರಣೆಯಾಗುತ್ತದೆ.
ಬೆಲ್ಲದಾನ : ಬೆಲ್ಲದಲ್ಲಿ ಬ್ರಹ್ಮದೇವರು, ಶ್ರೀ ಮಹಾಲಕ್ಷ್ಮಿಯು, ಶ್ರೀ ಮಹಾ ಗಣಪತೀ ದೇವರ ಸಾನಿಧ್ಯ ಇರುತ್ತದೆ. ಬೆಲ್ಲವನ್ನು ದಾನ ಮಾಡಿದರೆ ಬಹಳಷ್ಟು ಯೋಚನೆಗಳು ನಿವಾರಣೆಯಾಗುತ್ತದೆ, ನಿತ್ಯದಾರಿದ್ರ್ಯ ಅನುಭವಿಸುವವರು ಬೆಲ್ಲಕ್ಕೆ ಬಿಲ್ವಪತ್ರೆಯಿಂದ ಪೂಜೆ ಮಾಡುತ್ತಾ ಬಂದರೆ ದಾರಿದ್ರ್ಯ ಹಾಗೂ ಬಡತನ ನಿವಾರಣೆಯಾಗುತ್ತದೆ. ಗಣಪತಿಗೆ ಬೆಲ್ಲ ಮತ್ತು ಮಹಾಲಕ್ಷ್ಮಿಗೆ ಬೆಲ್ಲದನ್ನ ನೈವೇದ್ಯ ಮಾಡಿದರೆ ತುಂಬಾ ವಿಶೇಷ, ಧನ ಧಾನ್ಯ ಸಮೃದ್ಧಿಯಾಗುತ್ತದೆ.
ವಸ್ತ್ರದಾನ : ವಸ್ತ್ರದಾನ ಮಾಡುವುದರಿಂದ ಕುಲದೇವತೆ ತೃಪ್ತಿಯಾಗುತ್ತಾರೆ, ಸುಮಂಗಲೀ ದೋಷ ನಿವಾರಣೆಯಾಗುತ್ತದೆ. ಸ್ತ್ರೀ ದೋಷ ಮತ್ತು ಶಾಪಗಳು ನಿವಾರಣೆಯಾಗುತ್ತದೆ, ಸಕಲ ದೇವತೆಗಳು ತೃಪ್ತರಾಗುತ್ತಾರೆ.., ಆರೋಗ್ಯಭಾಗ್ಯವಾಗುತ್ತದೆ. ದಾನವನ್ನು ತೆಗೆದುಕೊಂಡ ವಸ್ತ್ರಗಳನ್ನು ದಾನ ಮಾಡಬಾರದು . ಸುಮಂಗಲಿಯರು ಪ್ರತ್ಯಕ್ಷ ಸ್ತ್ರೀ ದೇವತೆಗಳ ಸ್ವರೂಪ, ಹಾಗೂ ಕುಲದೇವತಾ ಸ್ವರೂಪ. ಸುಮಂಗಲಿಯರಿಗೆ ಸೀರೆ ಸಮೇತ ವಸ್ತ್ರದಾನ ಮಾಡಿದರೆ, ಮನೆಯ ದಾರಿದ್ರ್ಯ ನಿವಾರಣೆಯಾಗುತ್ತದೆ ..
ಹೆಸರುಬೇಳೆ : ವಿದ್ಯಾಲಕ್ಷ್ಮಿ ಅನುಗ್ರಹವಾಗುತ್ತದೆ, ಮನೆಯಲ್ಲಿ ಎಲ್ಲರೂ ವಿದ್ಯಾವಂತರಾಗುತ್ತಾರೆ. ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ದೊರೆಯುತ್ತದೆ. ಹೆಸರುಬೇಳೆ ದಾನದಿಂದ ಸಕಲ ದೇವಿಗಳೂ ತೃಪ್ತರಾಗುತ್ತಾರೆ. ಮಾಟ ಮಂತ್ರ ಮನೆಯ ಮೇಲೆ ಕೆಲಸ ಮಾಡುವುದಿಲ್ಲ. ಹೆಂಗಸರ ಗರ್ಭಕೋಶದ ಸಮಸ್ಯೆ ನಿವಾರಣೆಯಾಗುತ್ತದೆ..
ಬಂದುಗಳೇ ಯಾವ ದೋಷಗಳೂ ನಮಗೇ ಬರದೇ ಇರಲಿ, ಸಕಲ ದೋಷಗಳೂ ನಿವಾರಣೆಯಾಗಲಿ, ಗಂಡಹೆಂಡತಿ ಅನ್ಯೋನ್ಯವಾಗಿ ಬಾಳಲಿ ಅಂತ ಈ ಬಾಗಿನದಲ್ಲಿ ಇಷ್ಟು ವಸ್ತುಗಳು ದಾನ ಮಾಡಬೇಕು. ಇಂತಹ ಅತೀ ಸುಲಭ ದಾರಿಯನ್ನು ತೋರಿಸಿಕೊಟ್ಟ ನಮ್ಮ ಹಿರಿಯರು ಹಾಗೂ ಗುರುಗಳಿಗೆ ನಾವು ಸದಾ ಚಿರಋಣಿಯಾಗಿರಬೇಕು ಅಲ್ಲವಾ..? ಧನ್ಯವಾದಗಳು ಅವರಿಗೆ..
No comments:
Post a Comment
If you have any doubts. please let me know...